ದೀಪ ಹಚ್ಚಬೇಕು
ಕೇವಲ ಬೆಳಕು ಹರಡಲಲ್ಲ
ಕತ್ತಲ ಮೂಲೆಯಲ್ಲಿ ಕುಳಿತು ಅವಿತಿರುವ ನಿನ್ನ
ಮನದ ಭಯವ ಹೊಡೆದೋಡಿಸಲು
ದೀಪ ಹಚ್ಚಬೇಕು
ಕೇವಲ ಅಜ್ಞಾನ ಹೋಗಲಾಡಿಸಲಲ್ಲ
ಜ್ಞಾನದ ದಾಹವನ್ನು ಇನ್ನಷ್ಟು ಮತ್ತಷ್ಟು ಹೆಚ್ಚಿಸಲು
ದೀಪ ಹಚ್ಚಬೇಕು
ಕೇವಲ ಹಬ್ಬ ಆಚರಿಸಲಲ್ಲ
ಮನಸ್ಸಿನ ಖೇದವನ್ನು ತೊರೆದು ಹೊಸತನವನ್ನು ಪಡೆಯಲು
ದೀಪ ಹಚ್ಚಿ ಬೆಳಕು ಹರಿಸಿ
ಮನದ ಆಸೆ ನೀಗಿಸಲು , ಹೊಸತನವ ಪಡೆಯಲು .
ಹಣತೆಗೊಂದು ಹಣತೆ ತಾಗಿ ಸಣ್ಣ ಬೆಳಕು ದೊಡ್ಡದಾಗಿ
ಮನೆಯ ಮಿನುಗಿ ಮನವ ಬೆಳಗಿ ಹರಿದು ಹರಿದು ಹೊಮ್ಮಿ ಚೆಲ್ಲಿ
ನವೋಲ್ಲಾಸ ನೀಡಲು , ದೀಪ ಬೆಳಗಬೇಕು ಜ್ಯೋತಿ ಹರಡಬೇಕು .

Arpitha Rao
Banbury
No comments:
Post a Comment